alex Certify
ಕನ್ನಡ ದುನಿಯಾ       Mobile App
       

Kannada Duniya

ರಮ್ಯಾ ಅಬ್ಬರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್…?

ಬೆಂಗಳೂರು: ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿದ್ದ ಮಾಜಿ ಸಂಸದೆ, ನಟಿ ರಮ್ಯಾ ಕಾರ್ಯ ವೈಖರಿಯಿಂದ್ದ ಬೇಸರಗೊಂಡಿದ್ದ ಹೈಕಮಾಂಡ್, ಈಗ ಅವರಿಗೆ ನೀಡಲಾಗಿದ್ದ ಜವಾಬ್ದಾರಿಯನ್ನೇ ಬದಲಿಸಿದೆ. ಈ ಮೂಲಕ ರಮ್ಯಾರ ಸಾಮಾಜಿಕ ಜಾಲತಾಣಗಳಲ್ಲಿನ ಅನಗತ್ಯ ಅಬ್ಬರ, ವಿವಾದಗಳಿಗೆ ಅಂಕುಶ ಹಾಕಿದೆ.

ರಮ್ಯಾ ಬದಲಿಗೆ ರಾಜಸ್ಥಾನದ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿಖಿಲ್ ಜೆ. ಆಳ್ವಾ ಅವರಿಗೆ ಸಾಮಾಜಿಕ ಜಾಲತಾಣಗಳ ಜವಾಬ್ದಾರಿ ವಹಿಸಲಾಗಿದೆ.

ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾದ ಬಳಿಕ ಕಾಂಗ್ರೆಸ್ ಹಿರಿಯರು ರಮ್ಯಾ ಅವರಿಗೆ ಅನಗತ್ಯವಾಗಿ ಟ್ವೀಟ್ ಮಾಡದಂತೆ ಮತ್ತು ರಾಹುಲ್ ಗಾಂಧಿಗೆ ಸಂಬಂಧಪಟ್ಟ ಸುದ್ದಿಗಳನ್ನು ಟ್ವೀಟ್ ಮಾಡದಂತೆ ಸೂಚನೆ ನೀಡಿದ್ದರು. ಆದಾಗ್ಯೂ ರಮ್ಯಾ ಇದನ್ನು ಪಾಲಿಸದೆ ವಿನಾಕಾರಣ ಬಿಜೆಪಿ ಮತ್ತು ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿ ಯಡವಟ್ಟು ಮಾಡಿಕೊಂಡಿದ್ದರು. ಅಲ್ಲದೇ ಕಾರ್ಯಕರ್ತರಿಗೆ ತರಬೇತಿ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯುವಂತೆ ಸಲಹೆ ನೀಡಿದ್ದು ಕೂಡ ವಿವಾದಕ್ಕೆ ಕಾರಣವಾಗಿತ್ತು. ಈ ಎಲ್ಲಾ ಕಾರಣಗಳಿಂದ ರಮ್ಯಾಗೆ ನೀಡಿದ್ದ ಜವಾಬ್ದಾರಿಯನ್ನೇ ಈಗ ಕಾಂಗ್ರೆಸ್ ಹೈಕಮಾಂಡ್ ಬದಲಾಯಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...