alex Certify
ಕನ್ನಡ ದುನಿಯಾ       Mobile App
       

Kannada Duniya

ರಾಧಿಕಾ ನಟಿಯಲ್ಲವೇ? ಕುಮಾರಸ್ವಾಮಿಗೆ ರಮ್ಯಾ ಟಾಂಗ್

ramya 10

ನಟಿ ರಮ್ಯಾ ಹೋದ ಕಡೆಯಲ್ಲೆಲ್ಲಾ ರೈತರ ಆತ್ಮಹತ್ಯೆ ಸಂಭವಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿರುವುದಕ್ಕೆ ಮಾಜಿ ಸಂಸದೆ ರಮ್ಯಾ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ. ಆರ್, ಪೇಟೆ ತಾಲ್ಲೂಕಿನಲ್ಲಿ ಜಿಪಂ, ತಾಪಂ ಚುನಾವಣೆ ಪ್ರಚಾರ ಕೈಗೊಂಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಮ್ಯಾ ಸಿನಿಮಾ ನಟಿ, ಮತದಾರರು ಅವರನ್ನು ನಂಬಬಾರದು ಎಂದು ಕುಮಾರಸ್ವಾಮಿ ಅವರು ಹೇಳಿದ್ದು, ಸರಿಯಲ್ಲ. ಕುಮಾರಸ್ವಾಮಿ ಸಿನಿಮಾ ನಿರ್ಮಾಪಕರಾಗಿದ್ದಾರೆ. ಅವರ ಪುತ್ರ ಕೂಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ, ಅವರ ಪತ್ನಿಯೂ ಸಿನಿಮಾಗಳಲ್ಲಿ ನಟಿಸುತ್ತಾರೆ. ಇದನ್ನು ತಿಳಿದು ಕುಮಾರಸ್ವಾಮಿಯವರು ಮಾತನಾಡಬೇಕು ಎಂದು ರಮ್ಯಾ ತಿರುಗೇಟು ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಅವರ ಪತ್ನಿ ಸಿನಿಮಾದಲ್ಲಿ ನಟಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಕ್ಕೆ ರಾಧಿಕಾ ಸಿನಿಮಾ ನಟಿಯಲ್ಲವೇ ಎಂದು ಕೇಳಿದ್ದಾರೆ ರಮ್ಯಾ.

ನಾನು ಬಂದ ನಂತರ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದು ನನ್ನ ಮನಸ್ಸಿಗೆ ನೋವು ತಂದಿದೆ. ರೈತರ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕುಮಾರಸ್ವಾಮಿ ಅವರಂತೆ ನಾನು ಚಿಲ್ಲರೆ ರಾಜಕೀಯ ಮಾಡಲಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...