alex Certify
ಕನ್ನಡ ದುನಿಯಾ       Mobile App
       

Kannada Duniya

ರಮ್ಯಾ ಟ್ವೀಟ್ ಗೆ ಇನ್ಮುಂದೆ ಬಿಜೆಪಿಯಿಂದ ‘ನೋ ರಿಯಾಕ್ಷನ್’…?

ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ, ಬಿಜೆಪಿ ಮತ್ತು ಆ ಪಕ್ಷದ ನಾಯಕರ ವಿರುದ್ದ ಕೆರಳಿಸುವಂತಹ ಎಷ್ಟೇ ಟ್ವೀಟ್ ಮಾಡಿದರೂ ಅದಕ್ಕೆ ಪ್ರತಿಕ್ರಿಯೆ ನೀಡದಿರಲು ಬಿಜೆಪಿ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

ಹಾಗೊಂದು ವೇಳೆ ಪ್ರತಿಕ್ರಿಯೆ ನೀಡುವುದಿದ್ದರೂ ಅದಷ್ಟು ಸೌಮ್ಯ ಭಾಷೆಯಲ್ಲಿ ಉತ್ತರಿಸಬೇಕು. ಯಾವುದೇ ಕಾರಣಕ್ಕೂ ರಮ್ಯಾ ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಬಾರದೆಂಬ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತ ರಮ್ಯಾ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಕೆಲ ಬಿಜೆಪಿ ನಾಯಕರು ರಮ್ಯಾ ಅವರ ವೈಯಕ್ತಿಕ ಜೀವನದ ವಿಚಾರ ಪ್ರಸ್ತಾಪಿಸಿದ್ದು, ಇದು ಟೀಕೆಗೆ ಗುರಿಯಾಗಿತ್ತು. ಇಂತಹ ಹೇಳಿಕೆಗಳು ಮಹಿಳೆಯರ ಅಸಮಾಧಾನಕ್ಕೆ ಕಾರಣವಾಗಬಹುದೆಂಬ ಕಾರಣಕ್ಕೆ ಇನ್ನು ಮುಂದೆ ರಮ್ಯಾರವರ ಟ್ವೀಟ್ ಗಳ ಕುರಿತು ತಟಸ್ಥ ನೀತಿ ಅನುಸರಿಸುವ ಇಲ್ಲವೇ ಸೌಮ್ಯ ಭಾಷೆಯಲ್ಲಿ ಉತ್ತರಿಸುವ ನಿರ್ಧಾರಕ್ಕೆ ಬಿಜೆಪಿ ಬಂದಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...