alex Certify
ಕನ್ನಡ ದುನಿಯಾ       Mobile App
       

Kannada Duniya

ಮೂತ್ರ ವಿಸರ್ಜನೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ

rape 78klop

ಮೂತ್ರ ವಿಸರ್ಜನೆಗೆ ಹೋದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಕೋಲಾರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಬಾಲಕಿಯನ್ನು ಹಿಂಬಾಲಿಸಿದ ಅಪರಿಚಿತ ಯುವಕನೊಬ್ಬ ಕಟ್ಟಡದ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.

ಚಿಂತಾಮಣಿಯ ಸರ್ಕಾರಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕಟ್ಟಡದ ಮೇಲೆ 9 ವರ್ಷದ ಬಾಲಕಿ ಮೇಲೆ ಯುವಕ ಅತ್ಯಾಚಾರ ಎಸಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ಆಂಧ್ರಪ್ರದೇಶದಿಂದ ವಲಸೆ ಬಂದಿರುವ ಕುಟುಂಬವೊಂದು ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ವಾಸವಾಗಿದ್ದು, ಈ ಕುಟುಂಬಕ್ಕೆ ಸೇರಿದ ಬಾಲಕಿ ಬಸ್ ನಿಲ್ದಾಣ ಹಾಗೂ ಪಟ್ಟಣದಲ್ಲಿ ಭಿಕ್ಷೆ ಬೇಡುತ್ತಿದ್ದಳು. ಸಂಜೆಯ ನಂತರವೂ ಆಕೆ ಭಿಕ್ಷೆ ಬೇಡಿ ಬಸ್ ನಿಲ್ದಾಣ ಪಕ್ಕದಲ್ಲಿ ಮಲಗುತ್ತಿದ್ದಳು.

ಸಂಜೆ ಮನೆಗೆ ಹೋಗಿ ಬರುತ್ತಿದ್ದ ಬಾಲಕಿ ರಾತ್ರಿ ಇಲ್ಲಿಯೇ ಮಲಗುವುದನ್ನು ಗಮನಿಸಿದ ದುರುಳನೊಬ್ಬ ರಾತ್ರಿ ಬಾಲಕಿ ಮೂತ್ರ ವಿಸರ್ಜನೆಗೆ ಹೋಗಿದ್ದ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸಿ ಬಂದಿದ್ದು, ಬೆದರಿಸಿ ಅತ್ಯಾಚಾರ ಎಸಗಿ ಬಳಿಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...