alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೇದೆ

rape 7 nm 1

ರಕ್ಷಣೆ ನೀಡಬೇಕಾದ ಪೊಲೀಸರೇ ಕೆಲವೊಮ್ಮೆ ಆರೋಪಿಗಳಾಗುವ ಪ್ರಸಂಗ ಬಂದೊದಗುತ್ತದೆ. ಅಂತಹ ಪ್ರಕರಣದ ಮಾಹಿತಿ ಇಲ್ಲಿದೆ ನೋಡಿ. ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಒಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಬಾಲಕಿಗೆ ಹಣ ಕೊಡುವುದಾಗಿ ಆಮಿಷ ತೋರಿದ 45 ವರ್ಷದ ಮುಖ್ಯ ಪೇದೆ, ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯ ಪೋಷಕರು ಹಾಗೂ ಸಾರ್ವಜನಿಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯ ಪೇದೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂಬ ಮಾಹಿತಿ ಬಂದ ಕೂಡಲೇ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ಆಗಮಿಸಿದ್ದಾರೆ.

ಅಲ್ಲಿ ಬಾಲಕಿಯ ವಿಚಾರಣೆ ನಡೆಸಲಾಗಿದೆ. ನಂತರ ಪೋಷಕರು ಹಾಗೂ ಸಾರ್ವಜನಿಕರು ಗ್ರಾಮಾಂತರ ಠಾಣೆ ಎದುರು ಪ್ರತಿಭಟನೆ ನಡೆಸಿ, ಆರೋಪಿ ಮುಖ್ಯಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದು, ಇದಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಂದಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...