alex Certify
ಕನ್ನಡ ದುನಿಯಾ       Mobile App
       

Kannada Duniya

ಅಸಹಾಯಕ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ

rape-nmk 65

ತುಮಕೂರು: ಮನೆಯಲ್ಲಿ ಒಂಟಿಯಾಗಿದ್ದ ಯುವತಿ ಮೇಲೆ, ದುರುಳನೊಬ್ಬ ಅತ್ಯಾಚಾರ ಎಸಗಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ. ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಅರುಣ್ ಕುಮಾರ್ ಅತ್ಯಾಚಾರ ಎಸಗಿದ ಆರೋಪಿ. ಅದೇ ಗ್ರಾಮದ 28 ವರ್ಷದ ಯುವತಿಗೆ ಮಾತು ಬಾರದು. ಅಲ್ಲದೇ, ಕಿವಿಯೂ ಸರಿಯಾಗಿ ಕೇಳುವುದಿಲ್ಲ. ಆಕೆಯ ತಂದೆ ಇತ್ತೀಚೆಗೆ ಮೃತಪಟ್ಟಿದ್ದು, ತಾಯಿಯೊಂದಿಗೆ ವಾಸವಾಗಿದ್ದಳು. ತಾಯಿ ಬೆಳಗಿನ ಜಾವ ಮನೆಯಿಂದ ತೋಟಕ್ಕೆ ಹೋಗಿದ್ದು, ಈ ಸಂದರ್ಭದಲ್ಲಿ ಏಕಾಏಕಿ ಮನೆಗೆ ನುಗ್ಗಿದ ಅರುಣ್ ಕುಮಾರ್, ಯುವತಿಯನ್ನು ಬೆದರಿಸಿ ಅತ್ಯಾಚಾರ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಯುವತಿಯ ತಾಯಿ ಮನೆಗೆ ಬಂದ ನಂತರ ವಿಷಯ ತಿಳಿದು, ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಮೊದಲಿಗೆ ಸ್ವೀಕರಿಸಲು ನಿರಾಕರಿಸಿದ ಪೊಲೀಸರು, ನಂತರ ಗ್ರಾಮಸ್ಥರು ಯುವತಿಯ ಪರವಾಗಿದ್ದ ಕಾರಣ ದೂರು ದಾಖಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...