alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಗರ್ಭಿಣಿಯಾದಾಗ ಬೆಳಕಿಗೆ ಬಂತು ರಹಸ್ಯ

rape 8520 mk

ಬಾಲಕಿಯೊಬ್ಬಳನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಒಂದು ವರ್ಷದಿಂದ 16 ವರ್ಷ ವಯಸ್ಸಿನ ಬಾಲಕಿಯ ಮೇಲೆ 22 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.

ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಮನೆಯವರು ಆಸ್ಪತ್ರೆಗೆ ಕರೆದುಕೊಂಡು ವೈದ್ಯರಿಗೆ ತೋರಿಸಿದ್ದಾರೆ. ಆಕೆಯನ್ನು ಪರೀಕ್ಷಿಸಿದ ವೈದ್ಯರು, ಗರ್ಭಿಣಿಯಾಗಿರುವುದನ್ನು ತಿಳಿಸಿದ್ದಾರೆ. ಇದರಿಂದ ಗಾಬರಿಯಾದ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಅದೇ ಗ್ರಾಮದ ಯುವಕ ನಿರಂತರ 1 ವರ್ಷದಿಂದ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿರುವುದು ಗೊತ್ತಾಗಿದೆ. ಸಾಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕೇಸು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬೇಳೂರು ಗ್ರಾಮದ 22 ವರ್ಷದ ಯುವಕ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ದೂರು ನೀಡಿದ್ದಾಳೆ. ಶಾಲೆಗೆ ಹೋಗಿ ಬರುತ್ತಿದ್ದ ಬಾಲಕಿಯನ್ನು ಬೆದರಿಸಿ ಆರೋಪಿ ಈ ರೀತಿ ನೀಚ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...