alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಮೇಲೆ ಅತ್ಯಾಚಾರಕ್ಕೆತ್ನಿಸಿದ ವಯೋವೃದ್ದ

balaki mko 3.0

ವಯೋವೃದ್ಧನೊಬ್ಬ 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ ಎಸಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. 60 ವರ್ಷದ ಸೈಯದ್ ಅಬ್ದುಲ್ ಪಾಷ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸೈಯದ್ ಅಬ್ದುಲ್ ಪಾಷ ಗ್ರಾಮದಲ್ಲಿ ಅಂಗಡಿ ನಡೆಸುತ್ತಿದ್ದು, ಅಂಗಡಿಗೆ ತಿನಿಸು ಕೊಳ್ಳಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಪೋಷಕರು ಮುಳಬಾಗಿಲು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿ ಅಂಗಡಿಗೆ ಹೋಗಿದ್ದ ಸಂದರ್ಭದಲ್ಲಿ ಒಳಗೆ ಕರೆದ ಆರೋಪಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಅಲ್ಲಿಂದ ಆಕೆ ತಪ್ಪಿಸಿಕೊಂಡು ಮನೆಗೆ ಬಂದಿದ್ದಾಳೆ. ತಾಯಿಗೆ ವಿಷಯ ತಿಳಿಸಿದ್ದು, ಬಾಲಕಿಯ ತಂದೆ ಊರಿನಲ್ಲಿ ಇರಲಿಲ್ಲವಾದ್ದರಿಂದ ಸುಮ್ಮನಾಗಿದ್ದಾರೆ.

ತಂದೆ ಬಂದ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯ ಮೈ ಮೇಲೆ ತರಚಿದ ಗಾಯಗಳಾಗಿದ್ದು, ಆರೋಪಿ ಸೈಯದ್ ಅಬ್ದುಲ್ ಪಾಷ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...