alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿ ನಗ್ನ ಚಿತ್ರ ತೆಗೆದ ಶಿಕ್ಷಕನಿಂದ ಬ್ಲಾಕ್ ಮೇಲ್

rape-student

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ, ಅದನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ ಶಿಕ್ಷಕನೊಬ್ಬನನ್ನು ಬೆಂಗಳೂರು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಲಕ್ಷ್ಮಿಕಾತ್ ಬಂಧಿತ ಆರೋಪಿಯಾಗಿದ್ದಾನೆ.

ಬೆಂಗಳೂರಿನ ಜಾಲಹಳ್ಳಿಯ ಖಾಸಗಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿದ್ದ ಲಕ್ಷ್ಮಿಕಾಂತ್ ಅದೇಗೋ ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಿಕೊಂಡು ಅತ್ಯಾಚಾರ ಎಸಗಿದ್ದು, ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ. ಇದನ್ನು ತಿಳಿದ ಶಾಲೆಯ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಶಿಕ್ಷಕನ ಅಸಲಿಯತ್ತು ಬಯಲಾಗಿದೆ. ಈತ ಬರೋಬ್ಬರಿ ಮೂವರನ್ನು ಮದುವೆಯಾಗಿದ್ದಾನೆ ಎಂಬ ಸಂಗತಿ ಗೊತ್ತಾಗಿದೆ.

ಚಿತ್ರದುರ್ಗದಲ್ಲಿ ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಹಿಳೆಯೊಬ್ಬರ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಅವರನ್ನು ಮದುವೆಯಾಗಿದ್ದ. ಅಲ್ಲದೇ, ಯಶವಂತಪುರದಲ್ಲಿ ಮತ್ತು ತೀರ್ಥಹಳ್ಳಿಯಲ್ಲಿ ಮದುವೆಯಾಗಿದ್ದ ಎಂದು ಹೇಳಲಾಗಿದ್ದು, ಈಗ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಸಿಕ್ಕಿಬಿದ್ದಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...