alex Certify
ಕನ್ನಡ ದುನಿಯಾ       Mobile App
       

Kannada Duniya

ಜಾತ್ರೆಗೆಂದು ಕರೆದೊಯ್ದು ನೀಚ ಕೃತ್ಯ

ಮಂಗಳೂರು: ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ಯುವತಿಯನ್ನು ಕರೆದೊಯ್ದು, ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಕ್ಕಡದ ಕುಶಾಲಪ್ಪ(24), ಧನಂಜಯ(26) ಬಂಧಿತ ಆರೋಪಿಗಳು. ದೇಲಂಪಾಡಿಯ ಅಕ್ಕನ ಮನೆಯಲ್ಲಿದ್ದ ಯುವತಿಯನ್ನು ಫೆಬ್ರವರಿ 15 ರಂದು ರಾತ್ರಿ ಜಾತ್ರೆಗೆ ಬೈಕ್ ನಲ್ಲಿ ಕರೆದುಕೊಂಡು ಹೊರಟಿದ್ದ ಕುಶಾಲಪ್ಪ, ನೆಲ್ಯಾಡಿ ಬಳಿ ಧನಂಜಯನೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ.

ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು, ಅದೇ ದಿನ ಮಧ್ಯರಾತ್ರಿ ಉಪ್ಪಿನಂಗಡಿಯಲ್ಲಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಯುವತಿ ಫೆಬ್ರವರಿ 16 ರಂದು ಸಂಜೆ ಪೊಲೀಸರಿಗೆ ದೂರು ನೀಡಿದ್ದು, ಆಕೆ ನೀಡಿದ ಮಾಹಿತಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...