alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಟ್ಟೂರು ರಥ : ಮೂವರ ವಿರುದ್ಧ ಕೇಸ್

img-20170222-wa0039

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕು ಕೊಟ್ಟೂರಿನ ಕೊಟ್ಟೂರೇಶ್ವರ ರಥೋತ್ಸವದಲ್ಲಿ, ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳ ವಿರುದ್ಧ ಕೇಸ್ ದಾಖಲಾಗಿದೆ.

60 ಅಡಿ ಎತ್ತರದ ರಥ ಇದಾಗಿದ್ದು, ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕೂಡ್ಲಿಗಿಯ ಅಂಜಿನಪ್ಪ ಎಂಬುವವರು ಕೊಟ್ಟೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ರಥವನ್ನು ಪರಿಶೀಲನೆ ನಡೆಸಬೇಕಿತ್ತು. ನಿರ್ವಹಣೆ ಸರಿಯಾಗಿದೆಯೇ ಎಂದು ನೋಡಬೇಕಿತ್ತು. ಆದರೆ, ನಿರ್ಲಕ್ಷ್ಯ ತೋರಿದ್ದಾರೆ ಎಂದು ದೂರಿದ್ದಾರೆ.

ಮುಜರಾಯಿ ಇಲಾಖೆ ಅಧಿಕಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿ ಹಾಗೂ ದೇವಾಲಯದ ಆಡಳಿತ ಮಂಡಳಿಯ ಕಾರ್ಯನಿರ್ವಹಣಾಧಿಕಾರಿ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಕೊಟ್ಟೂರೇಶ್ವರ ರಥೋತ್ಸವ ನಡೆಯುವ ಸಂದರ್ಭದಲ್ಲಿ ಗಾಲಿಯ ಅಚ್ಚು ಮುರಿದು ರಥ ಉರುಳಿದ್ದು, ಹಲವರು ಗಾಯಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...