alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ. 21 ರ ವರೆಗೆ ರವಿ ಬೆಳಗೆರೆ ಜಾಮೀನು ಮುಂದುವರಿಕೆ

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ರವಿ ಬೆಳಗೆರೆ ಅವರಿಗೆ ಮಧ್ಯಂತರ ಜಾಮೀನು ಮುಂದುವರೆಸಲಾಗಿದೆ. ಡಿಸೆಂಬರ್ 21 ರ ವರೆಗೆ ಜಾಮೀನು ಮುಂದುವರೆಯಲಿದ್ದು, ಅಂದು ಜಾಮೀನು ಕುರಿತು ಸೆಷನ್ಸ್ ಕೋರ್ಟ್ ತೀರ್ಪು ನೀಡಲಿದೆ.

ಸುನಿಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ರವಿ ಬೆಳಗೆರೆ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಅನಾರೋಗ್ಯದ ಕಾರಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಾಮೀನು ಮಂಜೂರು ಮಾಡಲಾಗಿದೆ.

ಅವರಿಗೆ ಜಾಮೀನು ನೀಡಲು ಸರ್ಕಾರಿ ಅಭಿಯೋಜಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರವಿ ಬೆಳಗೆರೆ ಅವರಿಗೆ ಅನಾರೋಗ್ಯವಾಗಿರುವ ಬಗ್ಗೆ ವೈದ್ಯರಿಂದ ಕೋರ್ಟ್ ಹೇಳಿಕೆ ಪಡೆಯಬಹುದಾಗಿದೆ. ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಅವರು ಸಿಗರೇಟ್ ಸೇದಿದ್ದಾರೆ ಎಂದು ಅಭಿಯೋಜಕರು ವಿಚಾರಣೆ ಸಂದರ್ಭದಲ್ಲಿ ಹೇಳಿದ್ದಾರೆ. ಬಳಿಕ ಕೋರ್ಟ್ ಡಿಸೆಂಬರ್ 21 ರ ವರೆಗೆ ಜಾಮೀನು ಮುಂದುವರೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...