alex Certify
ಕನ್ನಡ ದುನಿಯಾ       Mobile App
       

Kannada Duniya

‘ಹೈಕಮಾಂಡ್ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ’

ವಿಜಯಪುರ: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯೂ ಇಲ್ಲ, ಐದು ವರ್ಷಗಳ ಕಾಲ ಸರ್ಕಾರ ಸುಭದ್ರವಾಗಿಯೇ ಆಡಳಿತ ನಡೆಸುತ್ತದೆ. ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ವದಂತಿ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಶಿವಾನಂದ ಪಾಟೀಲ, ಅಧಿಕಾರ ಅನ್ನುವುದು ಯಾರಿಗೂ ಶಾಶ್ವತವಲ್ಲ. ಆದರೆ ಅಧಿಕಾರದಲ್ಲಿರುವಷ್ಟು ದಿನ ಜನ ಸೇವೆ ಮಾಡಿಕೊಂಡಿರಬೇಕು. ನನಗೆ ಸಚಿವನಾಗಬೇಕು ಎಂಬ ಆಸೆಯಿತ್ತು, ಆಗಿದ್ದೇನೆ. ಆದರೆ ಎಷ್ಟು ದಿನ ಸಚಿವ ಸ್ಥಾನದಲ್ಲಿರುತ್ತೇನೆ ಎಂಬುದು ನನಗೇ ಗೊತ್ತಿಲ್ಲ. ಹೈಕಮಾಂಡ್ ಸೂಚಿಸಿದರೆ ಈಗಲೇ ಬೇಕಾದರೂ ರಾಜೀನಾಮೆ ನೀಡಲೂ ಸಿದ್ಧ ಎಂದರು.

ಇನ್ನು ಆಪರೇಷನ್ ಕಮಲದ ಬಗ್ಗೆಯಾಗಲೀ, ಬಿಜೆಪಿ ತಂತ್ರಗಳ ಬಗ್ಗೆಯಾಗಲಿ ನಾನು ತಲೆಕೆಡಿಸಿಕೊಂಡಿಲ್ಲ. ಸಚಿವನಾಗಿ ನನ್ನ ಇಲಾಖೆಯಲ್ಲಿ ಕೆಲಸ ಮಾಡುವುದಷ್ಟೇ ನನ್ನ ಜವಾಬ್ದಾರಿ. ಕಡಿಮೆ ಅವಧಿಯಲ್ಲಿಯೇ ನಾನು ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಿದ್ದೇನೆ. ಸರ್ಕಾರ ಸುಭದ್ರವಾಗಿದೆ ಎಂಬುದಂತು ನಿಜ ಎಂದು ಪಾಟೀಲ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...