alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿ.ಜೆ.ಪಿ.ಯಲ್ಲಿ ಭುಗಿಲೆದ್ದ ಬಂಡಾಯ

ಮೊದಲ ಪಟ್ಟಿ ಬಿಡುಗಡೆಯಾದ ಸಂದರ್ಭದಲ್ಲಿ ಬಂಡಾಯದ ಬಿಸಿ ತಗುಲಿದ್ದರಿಂದ ಬಿ.ಜೆ.ಪಿ. ನಾಯಕರು ಅಳೆದು, ತೂಗಿ 2 ನೇ ಪಟ್ಟಿ ರಿಲೀಸ್ ಮಾಡಿದ್ದಾರೆ.

82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, 2 ನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅನೇಕ ಕ್ಷೇತ್ರಗಳಲ್ಲಿ ಬಂಡಾಯದ ಕಹಳೆ ಮೊಳಗಿದೆ. ಟಿಕೆಟ್ ವಂಚಿತರು ಅಸಮಾಧಾನ ವ್ಯಕ್ತಪಡಿಸಿದ್ದು, ಆಕಾಂಕ್ಷಿಗಳ ಬೆಂಬಲಿಗರು ಹಲವೆಡೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಸಾಗರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿಯಲ್ಲಿ ಪ್ರಕಾಶ್ ಖಂಡ್ರೆ ಬೆಂಬಲಿಗರು ಟೈಯರ್ ಗೆ ಬೆಂಕಿ ಹಚ್ಚಿ ಪಕ್ಷದ ನಾಯಕರ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಆಕಾಂಕ್ಷಿಯಾಗಿದ್ದ ಎಸ್. ಹರೀಶ್ ಬೆಂಬಲಿಗರು ಬಿ.ಜೆ.ಪಿ.ಗೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕಲಘಟಗಿಯಲ್ಲಿ ಸಿ.ಎಂ. ನಿಂಬಣ್ಣ ಬೆಂಬಲಿಗರು ತೀವ್ರತರವಾಗಿ ಪ್ರತಿಭಟನೆ ನಡೆಸಿದ್ದು, ಬಂಡಾಯ ಸ್ಪರ್ಧೆಗೆ ನಿಂಬಣ್ಣ ಅವರ ಮೇಲೆ ಒತ್ತಡ ಹೇರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...