alex Certify
ಕನ್ನಡ ದುನಿಯಾ       Mobile App
       

Kannada Duniya

ತಲೆನೋವಾದ ಬಂಡಾಯ, ಅಧಿಕೃತ ಅಭ್ಯರ್ಥಿಗಳಿಗೆ ಆತಂಕ

ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಮುಂದಾಗಿ ಕಾರ್ಯತಂತ್ರ ರೂಪಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಬಂಡಾಯ ತಲೆನೋವಾಗಿ ಪರಿಣಮಿಸಿದೆ.

ಬಿ.ಜೆ.ಪಿ., ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ. ಆದರೆ, ಆಕಾಂಕ್ಷಿಗಳಾಗಿದ್ದವರು ಮತ್ತವರ ಬೆಂಬಲಿಗರು ಟಿಕೆಟ್ ಸಿಗದ ಕಾರಣ ಬಂಡಾಯವಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಟಿಕೆಟ್ ವಂಚಿತರು ಬಂಡಾಯವಾಗಿ ಸ್ಪರ್ಧಿಸುವುದು ಸಾಮಾನ್ಯ ಸಂಗತಿ. ಆದರೆ, ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಇದರಿಂದ ಹಿನ್ನಡೆಯಾಗುವುದಂತೂ ನಿಶ್ಚಿತ. ಕೆಲವೊಮ್ಮೆ ಬಂಡಾಯ ಅಭ್ಯರ್ಥಿಗಳೇ ವಿಜೇತರಾಗುತ್ತಾರೆ. ಬಂಡಾಯ ಸ್ಪರ್ಧೆಯ ಕಾರಣದಿಂದ ಕೆಲವೇ ಮತಗಳ ಅಂತರದಲ್ಲಿ ಅಧಿಕೃತ ಅಭ್ಯರ್ಥಿಗಳಿಗೆ ಸೋಲಾಗುವ ಸಾಧ್ಯತೆ ಇರುತ್ತದೆ. ಅಲ್ಲದೇ, ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದಾದ ಸಾಧ್ಯತೆ ಇರುತ್ತದೆ.

ಹಾಗಾಗಿ ರಾಜಕೀಯ ಪಕ್ಷಗಳ ನಾಯಕರು ಆಕಾಂಕ್ಷಿಗಳ ಮನವೊಲಿಸಿ, ಆದಷ್ಟು ಬಂಡಾಯವನ್ನು ಶಮನ ಮಾಡಲು ಕಾರ್ಯತಂತ್ರ ರೂಪಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ ಸೂಕ್ತ ಸ್ಥಾನ ಮಾನ ನೀಡುವ ಭರವಸೆಯನ್ನು ನೀಡಲಾಗ್ತಿದೆ. ಇದಕ್ಕೆ ಕೆಲವರು ಸಮ್ಮತಿಸಿದ್ದರೆ, ಉಳಿದವರು ಬಂಡಾಯವಾಗಿ ಸ್ಪರ್ಧಿಸುವ ತೀರ್ಮಾನ ಕೈಗೊಂಡಿದ್ದಾರೆ. ಬಿ.ಜೆ.ಪಿ., ಕಾಂಗ್ರೆಸ್ ನಲ್ಲಿ ಬಂಡಾಯದ ಕಹಳೆ ಜೋರಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...