alex Certify
ಕನ್ನಡ ದುನಿಯಾ       Mobile App
       

Kannada Duniya

ಸುಪ್ರೀಂ ಕೋರ್ಟ್ ಆದೇಶ ಪಾಲನೆಗಾಗಿ ನೀರು ಬಿಡಲಾಗ್ತಿದೆ-ಸಿಎಂ

cauvery_waterಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಾದ ಅನಿವಾರ್ಯತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ. ಒಂದು ವೇಳೆ ನೀರು ಬಿಡದಿದ್ದರೆ ಅವರು ಮತ್ತೆ ಕೋರ್ಟ್ ಮೊರೆ ಹೋಗುತ್ತಾರೆ. ಇದರಿಂದಾಗಿ ಕಾನೂನಾತ್ಮಕ ಸಮಸ್ಯೆ ಎದುರಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿಯೂ ಉತ್ತಮ ಮಳೆಯಾಗದಿದ್ದರೆ ಮೋಡ ಬಿತ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರಲ್ಲದೆ ನಮಗೆ ತೊಂದರೆ ಮಾಡಿಕೊಂಡು ತಮಿಳುನಾಡಿಗೆ ನೀರು ಹರಿಸುವುದಿಲ್ಲವೆಂದಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಕುರಿತು ಏಕವಚನ ಪ್ರಯೋಗಿಸಿದ್ದಕ್ಕೆ ಪ್ರತಿಕ್ರಿಯಿಸಿ ಮೊದಲು ಯಡಿಯೂರಪ್ಪ ಸಂಸ್ಕಾರ ಕಲಿತುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...