alex Certify
ಕನ್ನಡ ದುನಿಯಾ       Mobile App
       

Kannada Duniya

‘ಲಂಬಾಣಿ, ಭೋವಿ ಸಮುದಾಯಗಳನ್ನು ಪಟ್ಟಿಯಿಂದ ತೆಗೆಯಲ್ಲ’

ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಯ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ.

ಸಭೆಯಲ್ಲಿ ದಲಿತ ಸಮುದಾಯದ ನಾಯಕರು, ಸಚಿವರು ಭಾಗವಹಿಸಿ ವಿವಿಧ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ವರದಿಯಲ್ಲಿ ನೀಡಿರುವ ಮಾಹಿತಿ, ಶಿಫಾರಸ್ಸುಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ. ವರದಿ ಜಾರಿಯಾದಲ್ಲಿ ಆಗುವ ಪರಿಣಾಮ, ಕೈಗೊಳ್ಳಬೇಕಿರುವ ಕ್ರಮಗಳು ಸಾಧಕ, ಬಾಧಕಗಳ ಕುರಿತಾಗಿ ಚರ್ಚೆ ನಡೆದಿದೆ.

ವರದಿ ಜಾರಿಗೆ ಕೆಲವು ನಾಯಕರು ಒತ್ತಾಯಪಡಿಸಿದರೆ, ಮತ್ತೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ನಾಯಕರನ್ನು ಸಮಾಧಾನಪಡಿಸಿದ ಸಿ.ಎಂ., ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಭೆಯ ಬಳಿಕ ಸಚಿವ ಹೆಚ್. ಆಂಜನೇಯ ಮಾತನಾಡಿ, ವರದಿಯ ಕುರಿತಾಗಿ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ಸಲಹೆ ಪಡದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಲಂಬಾಣಿ, ಭೋವಿ ಸಮುದಾಯಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಗಳು ವರದಿಯ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...