alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರು

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದೀಗ ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ಸರ್ಕಾರದ ಅಸ್ತಿತ್ವಕ್ಕೆ ಕುತ್ತು ಬಂದಿದೆ.

ಹಲವಾರು ಅತೃಪ್ತ ಶಾಸಕರು ಚೆನ್ನೈ ಮೂಲಕ ಮುಂಬೈಗೆ ತೆರಳುತ್ತಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಮುಂಬೈನ ಪಂಚತಾರಾ ಹೋಟೆಲ್ ಮಾರಿಯಟ್ ನಲ್ಲಿ ಬೀಡುಬಿಟ್ಟಿರುವ ಕೆಲ ಶಾಸಕರಿಗೆ ಇವರುಗಳು ಜೊತೆಯಾಗಲಿದ್ದಾರೆನ್ನಲಾಗಿದೆ.

ಸೋಮವಾರದೊಳಗೆ ಕಾಂಗ್ರೆಸ್ ನ 18 ಕ್ಕೂ ಅಧಿಕ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂಬ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಹೇಳಿಕೆ ಬಳಿಕ ನಡೆಯುತ್ತಿರುವ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...