alex Certify
ಕನ್ನಡ ದುನಿಯಾ       Mobile App
       

Kannada Duniya

ಮಗನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಸೇಡು ತೀರಿಸಿಕೊಂಡ್ರಾ ರೇವಣ್ಣ?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಸಹೋದರ ಹೆಚ್.ಡಿ. ರೇವಣ್ಣ ಎಲ್ಲ ವಿಷಯಗಳಲ್ಲೂ ಮೂಗು ತೋರಿಸುತ್ತಿದ್ದಾರೆಂಬ ಮಾತುಗಳ ಮಧ್ಯೆ ಈಗ ಬೆಳಕಿಗೆ ಬಂದಿರುವ ಮತ್ತೊಂದು ಪ್ರಕರಣ  ಸರ್ಕಾರದ ಇರುಸುಮುರುಸಿಗೆ ಕಾರಣವಾಗಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಆರೋಪ ಹೊತ್ತಿದ್ದ ತಮ್ಮ ಪುತ್ರ ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನರಾಯಪಟ್ಟಣ ಸಬ್ ಇನ್ಸ್ಪೆಕ್ಟರ್ ಹರೀಶ್ ಎಂಬವರಿಗೆ ತಮ್ಮ ಪ್ರಭಾವ ಬಳಸಿ ಕಾರ್ಯ ನಿರ್ವಹಿಸದಂತೆ ಹೆಚ್.ಡಿ. ರೇವಣ್ಣ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

2018 ರ ಏಪ್ರಿಲ್ 29ರಂದು ಸೂರಜ್ ರೇವಣ್ಣ ತಮ್ಮ ಸ್ನೇಹಿತರೊಂದಿಗೆ ಸೇರಿ ಜಿಲ್ಲಾ ಪಂಚಾಯತ್ ಸದಸ್ಯ ಶ್ರೇಯಸ್ ಪಾಟೀಲ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ದೂರು ದಾಖಲಾಗಲು ಇನ್ಸ್ಪೆಕ್ಟರ್ ಹರೀಶ್ ಅವರೇ ಕಾರಣ ಎಂಬ ಕಾರಣಕ್ಕೆ ಅವರು ಕರ್ತವ್ಯಕ್ಕೆ ಹಾಜರಾಗದಂತೆ ಉನ್ನತಾಧಿಕಾರಿಗಳ ಮೂಲಕ ರೇವಣ್ಣ ಒತ್ತಡ ಹೇರಿದ್ದಾರೆಂಬ ಆರೋಪ ಈಗ ಕೇಳಿ ಬಂದಿದ್ದು ಇದಕ್ಕೆ ಸ್ವತಃ ರೇವಣ್ಣನವರೇ ಸ್ಪಷ್ಟೀಕರಣ ನೀಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...