alex Certify
ಕನ್ನಡ ದುನಿಯಾ       Mobile App
       

Kannada Duniya

ಇಬ್ಬರು ಯುವಕರು ನೀರು ಪಾಲು

bagal-river

ಬಾಗಲಕೋಟೆ: ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ, ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಗುಲಗಲ ಜಂಬಗಿ ಗ್ರಾಮದಲ್ಲಿ ನಡೆದಿದೆ.

ಸಮೀಪದ ಘಟಪ್ರಭಾ ನದಿಯಲ್ಲಿ 8 ಮಂದಿ ಈಜಲು ಹೋಗಿದ್ದ ಸಂದರ್ಭದಲ್ಲಿ ಶ್ರೀಧರ್(22), ಶ್ರೀನಿವಾಸ್(18) ಅವರು ನೀರಿನಲ್ಲಿ ಮುಳುಗಿದ್ದಾರೆ.

ಉಳಿದ 6 ಮಂದಿ ಪಾರಾಗಿದ್ದಾರೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಶ್ರೀಧರ್ ಶವ ಹೊರ ತೆಗೆದಿದ್ದಾರೆ.

ಶ್ರೀನಿವಾಸ್ ಶವಕ್ಕಾಗಿ ಹುಡುಕಾಟ ನಡೆದಿದೆ. ಮುಧೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...