alex Certify
ಕನ್ನಡ ದುನಿಯಾ       Mobile App
       

Kannada Duniya

ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿರುವ ನದಿಗಳು

ಶಿವಮೊಗ್ಗ: ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಧಾರಾಕಾರ ವರ್ಷಧಾರೆ ಸುರಿಯುತ್ತಿರುವ ಪರಿಣಾಮ ನದಿಗಳೆಲ್ಲ ಉಕ್ಕಿ ಹರಿಯತೊಡಗಿದೆ.

ತುಂಗಾ, ಭದ್ರೆ, ಶರಾವತಿ, ಮಾಲತಿ, ಕುಶಾವತಿ, ವರದಾ ಸೇರಿದಂತೆ ನದಿಗಳು, ಹಳ್ಳಕೊಳ್ಳಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ತುಂಗಾ ಜಲಾನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಗಾಜನೂರು ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿದೆ. 66,274 ಕ್ಯೂಸೆಕ್ ಒಳ ಹರಿವು ದಾಖಲಾಗಿದ್ದು, ಜಲಾಶಯದಿಂದ 65,115 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಶಿವಮೊಗ್ಗ ಕೋರ್ಪಲಯ್ಯ ಛತ್ರ ಸಮೀಪದ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಗಾಜನೂರು ಜಲಾಶಯ ವೀಕ್ಷಣೆಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಲಗ್ಗೆ ಇಡತೊಡಗಿದ್ದಾರೆ.  ಭದ್ರಾ ಜಲಾನಯನ ವ್ಯಾಪ್ತಿಯಲ್ಲೂ ಎಡೆಬಿಡದೇ ಒಂದೇ ಸಮನೆ ಮಳೆ ಸುರಿಯತೊಡಗಿದೆ. ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಅಪಾರ ಪ್ರಮಾಣದ ನೀರು ಜಲಾಶಯದಲ್ಲಿ ಸಂಗ್ರಹವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 3 ಅಡಿ ನೀರು ಸಂಗ್ರಹವಾಗಿದೆ. ಹಾಲಿ 162.1 ಅಡಿ ನೀರು ಸಂಗ್ರಹವಾಗಿದೆ. 33,674 ಕ್ಯೂಸೆಕ್ ಒಳ ಹರಿವು ಇದ್ದು, 237 ಕ್ಯೂಸೆಕ್ ನೀರನ್ನ ಹೊರಬಿಡಲಾಗುತ್ತಿದೆ.

ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಶರಾವತಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು 2.5 ಅಡಿಯಷ್ಟು ನೀರು ಜಲಾಶಯದಲ್ಲಿ ಹೆಚ್ಚಳವಾಗಿದೆ. ಜಲಾಶಯದ ನೀರಿನ ಮಟ್ಟ 1785.90 ಅಡಿಗೆ ತಲುಪಿದ್ದು, 51,675 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.

ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದ್ದು, ದೇಶ ವಿದೇಶಗಳಿಂದ ಅಪಾರ ಪ್ರಮಾಣದ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.
ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲ್ಲೂಕಿನಾದ್ಯಂತ ಮಳೆ ಅಬ್ಬರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ತಾಲ್ಲೂಕುಗಳ ಶಾಲಾ-ಕಾಲೇಜಿಗೆ ಗುರುವಾರ ಕೂಡ ರಜೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...