alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಮಳೆಗೆ ಮತ್ತಿಬ್ಬರು ಬಲಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಇಂಡಿ ತಾಲ್ಲೂಕಿನ ಹಳಗಣಕಿ ಗ್ರಾಮದಲ್ಲಿ ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಮಲಗಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇಂಡಿ ತಾಲ್ಲೂಕಿನಲ್ಲಿಯೇ ನಡೆದ ಮತ್ತೊಂದು ದುರಂತದಲ್ಲಿ ವೃದ್ಧ ದಂಪತಿ ಸಾವನ್ನಪ್ಪಿದ್ದಾರೆ. ಜೆವೂರ ಗ್ರಾಮದ ಹೊರ ವಲಯದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಕರಬಸಪ್ಪ ಆಕಳವಾಡಿ(75), ಇಂದಿರಮ್ಮ(65) ಮೃತಪಟ್ಟಿದ್ದಾರೆ.

ಜೆವೊರ ಹೊರವಲಯದಲ್ಲಿನ ತೋಟದ ಮನೆಯಲ್ಲಿ ದಂಪತಿ ವಾಸವಾಗಿದ್ದರು. ಭಾರೀ ಗಾಳಿ, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಝಳಕಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...