alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಕುಖ್ಯಾತ ರೌಡಿ ಶೀಟರ್ ಮೇಲೆ ಫೈರಿಂಗ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಕುಖ್ಯಾತ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದ ಪೊಲೀಸರು ಆತ ಹಲ್ಲೆ ಮಾಡಲೆತ್ನಿಸಿದಾಗ ಫೈರಿಂಗ್ ಮಾಡಿದ್ದಾರೆ.

ಕೆಂಗೇರಿ ಬಳಿಯ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತಮಗೆ ಬಂದ ಮಾಹಿತಿ ಆಧಾರದ ಮೇರೆಗೆ ರೌಡಿ ಶೀಟರ್ ಸೈಕಲ್ ರವಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ತೆರಳಿದ್ದರು.

ಈ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ಮಾಡಲೆತ್ನಿಸಿದಾಗ ಆತ್ಮರಕ್ಷಣೆಗಾಗಿ ರವಿ ಮೇಲೆ ಗುಂಡು ಹಾರಿಸಲಾಗಿದೆ. ಕೊಲೆ, ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದು, ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...