alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸಾಗಿಸಲಾಗ್ತಿತ್ತು ಕೋಟಿಗಟ್ಟಲೆ ಹಣ

cash seizedನೆರೆಯ ಕೇರಳದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಜ್ಜಾಗಿದೆ. ಮತದಾರರನ್ನು ಸೆಳೆಯಲು ಪ್ರಮುಖ ರಾಜಕೀಯ ಪಕ್ಷಗಳು ನಾನಾ ಆಶ್ವಾಸನೆ ನೀಡುತ್ತಿವೆ. ಇದರ ಜೊತೆಗೆ ಮತದಾರರನ್ನು ಸೆಳೆಯಲು ಹಣ, ಹೆಂಡದ ಆಮಿಷ ಒಡ್ಡಲಾಗುತ್ತಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಕೇರಳಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಯಾವುದೇ ದಾಖಲೆಯಿಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 1.34 ಕೋಟಿ ರೂ. ಹಣದ ಸಮೇತ ಸಿಕ್ಕಿ ಬಿದ್ದಿದ್ದಾರೆ.

ತಲಾ 67 ಲಕ್ಷ ರೂ. ಗಳಂತೆ ಎರಡು ಬ್ಯಾಗ್ ಗಳಲ್ಲಿ ಈ ಹಣವನ್ನು ಜೋಡಿಸಿಡಲಾಗಿದ್ದು, ಚುನಾವಣಾ ಇಲಾಖೆ ಹಾಗೂ ಪೊಲೀಸರು ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದ ವೇಳೆ ಇದು ಪತ್ತೆಯಾಗಿದೆ. ಈ ಬ್ಯಾಗುಗಳನ್ನು ತಂದಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಣದ ಮೂಲ ಕುರಿತು ಯಾವುದೇ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...