alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗಿಭದ್ರತೆ ನಡುವೆ ಮನೆ ತಲುಪಿದ ಶರತ್ ಮೃತದೇಹ

607958-rss-activists-killed-karnat

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಉದ್ವಿಗ್ನಗೊಂಡಿದ್ದ ಬಂಟ್ವಾಳ ಪರಿಸ್ಥಿತಿ ಕೊಂಚ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಮಧ್ಯೆ ಶರತ್ ಮೃತದೇಹ ತವರೂರು ತಲುಪಿದ್ದು, ಸಾರ್ವಜನಿಕ ದರ್ಶನಕ್ಕಿಡಲು ಎಲ್ಲ ವ್ಯವಸ್ಥೆ ಮಾಡಲಾಗಿದೆ.

ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ಜುಲೈ 4ರಂದು ಹಲ್ಲೆಗೊಳಗಾಗಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಶರತ್  ಶುಕ್ರವಾರ ಎ.ಜೆ.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಬೆಳಿಗ್ಗೆ ಶರತ್ ಮೃತದೇಹವನ್ನು ಬೃಹತ್ ಮೆರವಣಿಗೆ ಮೂಲಕ ಮನೆಗೆ ತೆಗೆದುಕೊಂಡು ಹೋಗಲಾಗಿದೆ. ಮೆರವಣಿಗೆ ತೆರಳಿದ ನಂತ್ರ ಬಿ.ಸಿ. ರೋಡ್ ನಲ್ಲಿ ದುಷ್ಕರ್ಮಿಗಳು ಗಲಭೆ ನಡೆಸಿದ್ದು, ಕಾರು, ಆಟೋಗಳಿಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಗಲಾಟೆ ಹಿಂದೆ ಯಾರಿದ್ದಾರೆಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಮಧ್ಯೆ ಶರತ್ ಮನೆ ಹಾಗೂ ಅಂತಿಮ ಸಂಸ್ಕಾರ ನಡೆಯುವ ಸ್ಥಳದಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...