alex Certify
ಕನ್ನಡ ದುನಿಯಾ       Mobile App
       

Kannada Duniya

RTO ಅಧಿಕಾರಿ ಸೇರಿ 8 ಮಂದಿ ಅರೆಸ್ಟ್

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿಯ ಝಳಕಿಯಲ್ಲಿ ಆರ್.ಟಿ.ಓ. ಚೆಕ್ ಪೋಸ್ಟ್ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಅವ್ಯವಹಾರ ನಡೆಸಿರುವುದು, ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿರುವುದು ಕಂಡು ಬಂದ ಹಿನ್ನಲೆಯಲ್ಲಿ ಆರ್.ಟಿ.ಓ. ಅಧಿಕಾರಿ ಸೇರಿ 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಸಂಗ್ರಹಿಸಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.

ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರ್.ಟಿ.ಓ. ಅಧಿಕಾರಿ, ಇಬ್ಬರು ಹೋಂಗಾರ್ಡ್ಸ್ ಸೇರಿ 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಎ.ಸಿ.ಬಿ. ಎಸ್.ಪಿ. ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ. ಮಲ್ಲೇಶ್ ದೊಡ್ಡಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...