alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ.ಎಲ್. ಗೂ ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ಅನಧಿಕೃತ ಆಟೋಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ, ಸಾರಿಗೆ ಇಲಾಖೆ ಹೊಸ ನಿಯಮ ಜಾರಿಗೆ ಮುಂದಾಗಿದೆ. ಆಟೋ ಚಾಲಕರು ಡಿ.ಎಲ್.ಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಬೇಕಿದೆ.

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ನಿಯಮ ಜಾರಿಗೆ ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಹೊಸ ಸಾಫ್ಟ್ ವೇರ್ ಸಿದ್ಧಪಡಿಸಲಾಗ್ತಿದೆ.

ಜನವರಿ ಅಂತ್ಯದೊಳಗೆ ಎಲ್ಲಾ ಆಟೋ ಚಾಲಕರು ತಮ್ಮ ಡಿ.ಎಲ್.ಗಳಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಬೇಕಿದೆ. ಒಂದು ವೇಳೆ ನಿಗದಿತ ಸಮಯದಲ್ಲಿ ಆಧಾರ್ ಜೋಡಣೆ ಮಾಡದ ಚಾಲನಾ ಪರವಾನಗಿಯನ್ನು ರದ್ದುಪಡಿಸಲಾಗುವುದು.

ಬೆಂಗಳೂರಿನಲ್ಲಿ 1.25 ಲಕ್ಷ ಆಟೋಗಳಿಗೆ ಪರವಾನಗಿಯನ್ನು ನೀಡಲಾಗಿದ್ದು, ಅನಧಿಕೃತವಾಗಿ ಸುಮಾರು 50,000 ಕ್ಕೂ ಅಧಿಕ ಆಟೋ ಸಂಚರಿಸುತ್ತಿವೆ. ಒಂದೇ ಚಾಲನಾ ಪರವಾನಗಿಯಲ್ಲಿ ಹಲವರು ಆಟೋ ಓಡಿಸುತ್ತಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...