alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಸಭೆಗೆ ಎಂಟ್ರಿಕೊಡಲಿದ್ದಾರಾ ಎಸ್.ಎಲ್.ಭೈರಪ್ಪ?

Photo Caption

ಬೆಂಗಳೂರು: ಸಾಹಿತಿ ಎಸ್.ಎಲ್.ಭೈರಪ್ಪ ಅವರನ್ನು, ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನ ಮಾಡಬೇಕೆಂದು ರಾಜ್ಯ ಬಿಜೆಪಿ ಘಟಕ ಶಿಫಾರಸು ಮಾಡಿದೆ. ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದ ಹಿರಿಯ ರಂಗಕಲಾವಿದೆ ಹಾಗೂ ಗಾಯಕಿ ಬಿ. ಜಯಶ್ರೀ ಅವರ ಅವಧಿ ಪೂರ್ಣಗೊಂಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಹೆಸರನ್ನು ರಾಜ್ಯಸಭೆ ಸದಸ್ಯರಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ. ಈ ಹಿಂದೆಯೇ ಭೈರಪ್ಪ ಅವರನ್ನು ನಾಮನಿರ್ದೇಶನ ಮಾಡಲು ಬಿಜೆಪಿ ರಾಜ್ಯ ಘಟಕ ಚರ್ಚೆ ನಡೆಸಿತ್ತು. ಇದಕ್ಕೆ ಭೈರಪ್ಪನವರು ಒಪ್ಪಿದ್ದರಿಂದ ಅವರ ಹೆಸರನ್ನೇ ಶಿಫಾರಸು ಮಾಡಲಾಗಿದೆ ಎಂದು ಹೇಳಲಾಗಿದೆ. ಸಾಹಿತಿ ಎಸ್.ಎಲ್. ಭೈರಪ್ಪ ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶಿತರಾಗಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕನ್ನಡ ಸಾಹಿತ್ಯ ಲೋಕದಲ್ಲಿ ಕಾದಂಬರಿಗಳ ಮೂಲಕ ಹೊಸತನ ಮೂಡಿಸಿದ ಎಸ್.ಎಲ್. ಭೈರಪ್ಪನವರ ಕೃತಿಗಳು ದಾಖಲೆಯ ಮುದ್ರಣ ಕಂಡಿವೆ. ಅವರು ಸಾಹಿತ್ಯದಲ್ಲಿ ಸಲ್ಲಿಸಿದ ಸೇವೆಗಾಗಿ, ಹಲವಾರು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ. ಇದೀಗ ಬಿಜೆಪಿ ಅವರ ಹೆಸರನ್ನು ರಾಜ್ಯಸಭೆ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...