alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುರಿತು ಎಸ್.ಆರ್. ಪಾಟೀಲ್ ಹೇಳಿದ್ದೇನು?

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಸ್ಪಷ್ಟನೆ ನೀಡಿರುವ ಎಸ್.ಆರ್. ಪಾಟೀಲ್, ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಉಸ್ತುವಾರಿಯನ್ನು ತಾವು ವಹಿಸಿಕೊಂಡಿದ್ದು, ಚುನಾವಣೆಯಲ್ಲಿ ಪಕ್ಷ ನಿರೀಕ್ಷಿತ ಮಟ್ಟದ ಯಶಸ್ಸು ಸಾಧಿಸದ ಕಾರಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವುದಾಗಿ ಬರುತ್ತಿರುವ ವರದಿಗಳೆಲ್ಲ ಸುಳ್ಳು. ರಾಜೀನಾಮೆಗೆ ಪಕ್ಷದಿಂದ ಯಾವುದೇ ಒತ್ತಡವಿಲ್ಲದಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿನ ಪಕ್ಷದ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ಕಾಂಗ್ರೆಸ್ ನಾಯಕರ ಕುರಿತು ತಾವು ಯಾವುದೇ ಅಸಮಾಧಾನ ಹೊಂದಿಲ್ಲವೆಂದು ಎಸ್.ಆರ್. ಪಾಟೀಲ್ ಹೇಳಿದ್ದಾರೆ.

ತಮ್ಮ ರಾಜಕೀಯ ಜೀವನದಲ್ಲಿ ಅಧಿಕಾರಕ್ಕಾಗಿ ಎಂದಿಗೂ ಆಸೆ ಪಟ್ಟಿಲ್ಲ. ಮಂತ್ರಿ ಮಾಡಿದರೂ ಮಾಡದಿದ್ದರೂ ತಮಗೆ ಚಿಂತೆ ಇಲ್ಲ. ಹುಟ್ಟಾ ಕಾಂಗ್ರೆಸಿಗರಾಗಿರುವ ತಾವು, ಕಡೆತನಕ ಕಾಂಗ್ರೆಸ್ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...