alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸಂಪುಟ ರಚನೆಗೆ ಮುನ್ನವೇ ಕಾಂಗ್ರೆಸ್ ಮೊದಲ ವಿಕೆಟ್ ಪತನ?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರಕಾರದ ಸಚಿವ ಸಂಪುಟ ರಚನೆ ಕಸರತ್ತು ನಡೆದಿರುವ ಬೆನ್ನಲ್ಲೇ ಕಾಂಗ್ರೆಸ್ ಗೆ ಮೊದಲ ಆಘಾತ ಎದುರಾಗಿದೆ. ಪಕ್ಷದ ಹಿರಿಯ ನಾಯಕ ಎಸ್.ಆರ್. ಪಾಟೀಲ್ ತಮ್ಮ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿರುವ ಎಸ್.ಆರ್. ಪಾಟೀಲ್, ಅಸ್ತಿತ್ವಕ್ಕೆ ಬಂದಿರುವ ಮೈತ್ರಿಕೂಟದ ಸರ್ಕಾರದಲ್ಲಿ ಹಿರಿಯ ಕಾಂಗ್ರೆಸಿಗರಿಗೆ ಮನ್ನಣೆ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆನ್ನಲಾಗಿದೆ.

ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ಮುಖಂಡರಾಗಿರುವ ಎಸ್.ಆರ್. ಪಾಟೀಲ್ ತಮ್ಮ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ವರಿಷ್ಠರನ್ನು ಕಂಗೆಡಿಸಿದೆ ಎಂದು ತಿಳಿದುಬಂದಿದೆ. ಅವರ ಮನವೊಲಿಸುವ ಕಾರ್ಯಕ್ಕೆ ನಾಯಕರು ಮುಂದಾಗಿದ್ದು, ಇದಕ್ಕೆ ಎಸ್.ಆರ್. ಪಾಟೀಲ್ ಪ್ರತಿಕ್ರಿಯೆ ಏನೆಂಬುದನ್ನು ಕಾದು ನೋಡಬೇಕಿದೆ.

ಹಿಂದೆ ಸಚಿವರಾಗಿದ್ದವರಿಗೆ ಮೈತ್ರಿಕೂಟದ ಸರ್ಕಾರದಲ್ಲಿ ಅವಕಾಶ ಕಲ್ಪಿಸದಿರುವ ತೀರ್ಮಾನವನ್ನು ಕಾಂಗ್ರೆಸ್ ವರಿಷ್ಠ ಮಂಡಳಿ ಕೈಗೊಂಡಿದ್ದೇ, ಎಸ್.ಆರ್. ಪಾಟೀಲ್ ಅವರ ರಾಜೀನಾಮೆಗೆ ಕಾರಣವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...