alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರು ದಸರಾ ಉದ್ಘಾಟನೆಗೆ ಸಚಿನ್ ತೆಂಡೂಲ್ಕರ್?

sachin-tendulkar-3444ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲು ಈ ಬಾರಿ ‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್ ಅವರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿಂದು ಪತ್ರಿಕಾಗೋಷ್ಟಿಯಲ್ಲಿ ಈ ವಿಚಾರ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಸಾಹಿತಿಗಳಾದ ಚನ್ನವೀರ ಕಣವಿ, ಪ್ರೊ. ಕೆ.ಎಸ್. ನಿಸಾರ್ ಅಹಮದ್, ಎಸ್.ಎಲ್. ಬೈರಪ್ಪ ಹಾಗೂ ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಹೆಸರು ಪ್ರಸ್ತಾಪವಾಗಿದ್ದು, ಅಂತಿಮ ತೀರ್ಮಾನವನ್ನು ಕಾರ್ಯಕಾರಿ ಸಮಿತಿ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 1 ರಂದು ಬೆಳಗ್ಗೆ 11.40 ಕ್ಕೆ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ. ವಿಜಯದಶಮಿ ದಿನವಾದ ಆಕ್ಟೋಬರ್ 11 ರಂದು ಜಂಬೂ ಸವಾರಿ ನಡೆಯಲಿದೆ ಎಂದು ಹೇಳಿದ ಸಿದ್ದರಾಮಯ್ಯನವರು, ಪಂಚಾಂಗದ ಪ್ರಕಾರ ಈ ಬಾರಿ ವಿಜಯದಶಮಿ ಹನ್ನೊಂದನೇ ದಿನಕ್ಕೆ ಬರುತ್ತಿದೆ. ಕಳೆದ ವರ್ಷ ಆಯುಧ ಪೂಜೆ ಮತ್ತು ವಿಜಯದಶಮಿ ಒಂದೇ ದಿನ ಬಂದಿತ್ತು ಎಂಬ ಮಾಹಿತಿ ನೀಡಿದರು.

ಕಳೆದ ಬಾರಿ ಭೀಕರ ಬರಗಾಲ ಇದ್ದ ಕಾರಣ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಹಲವೆಡೆ ಉತ್ತಮ ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಮಳೆ ಕೊರತೆಯಾದ ಕಾರಣ ಜಲಾಶಯಗಳು ಭರ್ತಿ ಆಗಿಲ್ಲವೆಂದ ಮುಖ್ಯಮಂತ್ರಿಗಳು, ಅದ್ದೂರಿ ಅಲ್ಲದಿದ್ದರೂ ಕಳೆದ ಬಾರಿಗಿಂತ ಉತ್ತಮವಾಗಿ ಈ ಬಾರಿ ದಸರಾ ಉತ್ಸವ ನಡೆಯಲಿದೆ. ಸಾಂಪ್ರದಾಯಿಕ ಹಾಗೂ ಜನಾಕರ್ಷಕವಾಗಿ ಉತ್ಸವ ಜರುಗಲಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...