alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಮೂಡಿಸಿದೆ ಬೇಳೂರು ಗೋಪಾಲಕೃಷ್ಣ ನಡೆ

ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಒಮ್ಮೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತೊಮ್ಮೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ಎನ್ನುವ ಗೊಂದಲ ಉಂಟಾಗಿತ್ತು.

ಬಿ.ಜೆ.ಪಿ. ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಹಿಂದೆ ಹೊಸನಗರ ಕ್ಷೇತ್ರದಿಂದ ಶಾಸಕರಾಗಿದ್ದ ಹರತಾಳು ಹಾಲಪ್ಪ ಕ್ಷೇತ್ರ ಪುನರ್ ವಿಂಗಡಣೆ ಕಾರಣದಿಂದ ಸೊರಬ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದರು. ಕುಮಾರ್ ಬಂಗಾರಪ್ಪ ಬಿ.ಜೆ.ಪಿ. ಸೇರಿ ಸೊರಬದಲ್ಲಿ ಅಭ್ಯರ್ಥಿಯಾಗಿದ್ದು, ಹಾಲಪ್ಪ ಸಾಗರಕ್ಕೆ ಬಿ.ಜೆ.ಪಿ. ಅಭ್ಯರ್ಥಿಯಾಗಿದ್ದಾರೆ.

ಸಾಗರ ಕ್ಷೇತ್ರದಲ್ಲಿ 2 ಬಾರಿ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣ ಈ ಬಾರಿ ಪ್ರಬಲ ಆಕಾಂಕ್ಷಿಯಾಗಿದ್ದರು. ಹಾಲಪ್ಪ ಅವರಿಗೆ ಟಿಕೆಟ್ ಘೋಷಣೆಯಾಗ್ತಿದ್ದಂತೆ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ ಅವರು, ಸಾಗರದಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಜೆ.ಡಿ.ಎಸ್. ಅಭ್ಯರ್ಥಿಗಳನ್ನು ಘೋಷಿಸಿದ್ದು, ಸಾಗರ ಕ್ಷೇತ್ರಕ್ಕೆ ಮಾತ್ರ ಘೋಷಿಸಿಲ್ಲ. ಕಾಂಗ್ರೆಸ್ ನಿಂದ ಕಾಗೋಡು ತಿಮ್ಮಪ್ಪ ಸ್ಪರ್ಧಿಸಿದ್ದು, ಹರತಳು ಹಾಲಪ್ಪ ಬಿ.ಜೆ.ಪಿ. ಅಭ್ಯರ್ಥಿಯಾಗಿದ್ದಾರೆ.

ಹಾಲಪ್ಪ ಅವರಿಗೆ ಬಿ.ಜೆ.ಪಿ. ಟಿಕೆಟ್ ಖಚಿತವಾಗುತ್ತಿದ್ದಂತೆ ಬೇಳೂರು ಗೋಪಾಲಕೃಷ್ಣ ಬೆಂಬಲಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೇಳೂರು ಬಂಡಾಯವಾಗಿ ಸ್ಪರ್ಧಿಸುತ್ತಾರಾ? ಇಲ್ಲವೇ ಬಿ.ಜೆ.ಪಿ.ಯಲ್ಲಿಯೇ ಉಳಿಯುತ್ತಾರಾ ಎಂಬುದು ಬೆಂಬಲಿಗರ ಸಭೆಯಲ್ಲಿ ನಿರ್ಧಾರವಾಗಲಿದ್ದು, ಅವರ ನಡೆ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...