alex Certify
ಕನ್ನಡ ದುನಿಯಾ       Mobile App
       

Kannada Duniya

ಹರತಾಳು ಹಾಲಪ್ಪಗೆ ಟಿಕೆಟ್, ಬೇಳೂರು ಬೆಂಬಲಿಗರಿಂದ ಬಿ.ಜೆ.ಪಿ. ವಾಹನಕ್ಕೆ ಕಲ್ಲು

ಶಿವಮೊಗ್ಗ: ಬಿ.ಜೆ.ಪಿ. ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ, ತೀರ್ಥಹಳ್ಳಿಗೆ ಆರಗ ಜ್ಞಾನೇಂದ್ರ, ಸಾಗರಕ್ಕೆ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಗರದಲ್ಲಿ ಬಿ.ಜೆ.ಪಿ. ಡಿಜಿಟಲ್ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಫ್ಲೆಕ್ಸ್ ಗಳನ್ನು ಹರಿದು ಹಾಕಲಾಗಿದೆ. ಡಿಜಿಟಲ್ ವಾಹನದ ಪ್ರಚಾರ ಸಾಮಗ್ರಿಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ, ಯಡಿಯೂರಪ್ಪ ಭಾವಚಿತ್ರಕ್ಕೆ ಹಾನಿ ಮಾಡಿ, ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.

ಬೇಳೂರು ಗೋಪಾಲ ಕೃಷ್ಣ ಟಿಕೆಟ್ ಸಿಗದಿರುವುದರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಖಚಿತವಾಗಿತ್ತಾದರೂ, ಹರತಾಳು ಹಾಲಪ್ಪ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದರಿಂದ ಬಿ.ಜೆ.ಪಿ. ನಾಯಕರು ಇಬ್ಬರನ್ನು ಕರೆಸಿ ಚರ್ಚೆ ನಡೆಸಿದ್ದರು. ಅಂತಿಮವಾಗಿ ಹಾಲಪ್ಪಗೆ ಚಾನ್ಸ್ ಸಿಕ್ಕಿದೆ. ಬೇಳೂರಿಗೆ ನಿರಾಸೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...