alex Certify
ಕನ್ನಡ ದುನಿಯಾ       Mobile App
       

Kannada Duniya

ಬೇಳೂರು ಗೋಪಾಲಕೃಷ್ಣರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು-ಹಾಲಪ್ಪ

ಶಿವಮೊಗ್ಗ : ಬೇಳೂರು ಗೋಪಾಲಕೃಷ್ಣ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವುದು ಸಹಜವಾಗಿದ್ದು, ಅವರನ್ನು ಪಕ್ಷದ ನಾಯಕರ ಸಮ್ಮುಖದಲ್ಲಿ ಸಮಾಧಾನಪಡಿಸಲಾಗುವುದು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಹರತಾಳು ಹಾಲಪ್ಪ, ಸಾಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಐವರು ಆಕಾಂಕ್ಷಿಗಳಿದ್ದರು. ಅವರಲ್ಲಿ ಮೂವರನ್ನು ಸಮಾಧಾನಪಡಿಸಲಾಗಿದೆ. ಬೇಳೂರು ಗೋಪಾಲಕೃಷ್ಣ ಅವರೊಂದಿಗೆ ಪಕ್ಷದ ನಾಯಕರು ಮಾತನಾಡಲಿದ್ದು, ಅವರನ್ನು ಸಮಾಧಾನಪಡಿಸಲಿದ್ದಾರೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ಟಿಕೆಟ್ ಘೋಷಣೆಯಾಗುತ್ತಲೇ ಸಾಗರದಲ್ಲಿ ವಿನಾಯಕ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ವಿನಾಯಕ ಯಾವ ಪಕ್ಷದಲ್ಲಿಯೂ ಗುರುತಿಸಿಕೊಂಡಿಲ್ಲ. ಆತ ನನ್ನ ಸ್ನೇಹಿತ ಎಂದು ಪ್ರಶ್ನೆಯೊಂದಕ್ಕೆ ಹರತಾಳು ಹಾಲಪ್ಪ ಪ್ರತಿಕ್ರಿಯಿಸಿದರು.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...