alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ, ಮಾರ್ಚ್ 3 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಆಡಳಿತ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಇದಕ್ಕಿಂತ ಮೊದಲೇ ವೇತನ ಪರಿಷ್ಕರಣೆ ಕುರಿತಾಗಿ ಸರ್ಕಾರ ಆದೇಶ ಹೊರಡಿಸಲಿದೆ. 6 ನೇ ವೇತನ ಆಯೋಗ ಮಾಡಿರುವ ಶಿಫಾರಸಿನಂತೆ ಶೇ. 30 ರಷ್ಟು ವೇತನ ಹೆಚ್ಚಳ ಮಾಡಿ, ಮಾರ್ಚ್ ಮೊದಲ ವಾರದೊಳಗೆ ಆದೇಶ ಹೊರಡಿಸಲಾಗುತ್ತದೆ.

ಫೆಬ್ರವರಿ 27 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ತೀರ್ಮಾನ ಕೈಗೊಂಡು ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ಮೊದಲೇ ವೇತನ ಹೆಚ್ಚಳದ ಅಧಿಕೃತ ಆದೇಶ ಹೊರಡಿಸಲಾಗುವುದು. ಸಮ್ಮೇಳನ ಆರಂಭವಾಗುವ ವೇಳೆಗೆ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...