alex Certify
ಕನ್ನಡ ದುನಿಯಾ       Mobile App
       

Kannada Duniya

ಶಶಿಕಲಾ ಆರೋಗ್ಯದಲ್ಲಿ ಏರುಪೇರು: ಜೈಲು ಆಸ್ಪತ್ರೆಯಲ್ಲೇ ಚಿಕಿತ್ಸೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ವಿ.ಕೆ. ಶಶಿಕಲಾ ಅನಾರೋಗ್ಯಕ್ಕೀಡಾಗಿದ್ದು, ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಶಶಿಕಲಾ ಅವರಿಗೆ ಬಿಪಿ, ಶುಗರ್ ಇದ್ದು ಪದೇ ಪದೇ ಶುಗರ್, ಬಿಪಿ ಹೆಚ್ಚಾಗುತ್ತಿದೆ ಎನ್ನಲಾಗಿದೆ. ನಿನ್ನೆ ರಾತ್ರಿ ವೇಳೆಗೆ ಸಮಸ್ಯೆ ಉಲ್ಬಣಗೊಂಡಿದ್ದು, ಜೈಲು ವೈದ್ಯರೇ ಸೂಕ್ತ ಚಿಕಿತ್ಸೆ ನೀಡಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಕಳೆದ ಆರು ತಿಂಗಳ ಹಿಂದೆ ಕೂಡ ಶಶಿಕಲಾಗೆ ಅತಿಯಾದ ಶುಗರ್ ಕಾಣಿಸಿಕೊಂಡಿತ್ತು. ಒಂದು ವೇಳೆ ಆರೋಗ್ಯದಲ್ಲಿ ಚೇತರಿಕೆ ಕಾಣದಿದ್ದರೆ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡುವ ಸಾಧ್ಯತೆ ಇದೆ ಎಂದು ಪರಪ್ಪನ ಅಗ್ರಹಾರ ಜೈಲು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...