alex Certify
ಕನ್ನಡ ದುನಿಯಾ       Mobile App
       

Kannada Duniya

ಕೊನೆಗೂ ಕ್ಷಮೆ ಕೇಳಿದ ಕಟ್ಟಪ್ಪ ಸತ್ಯರಾಜ್

download-2

ಕಾವೇರಿ, ಕನ್ನಡಿಗರ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಹುಬಲಿ-2 ಚಿತ್ರದ ನಟ ಸತ್ಯರಾಜ್ ಕೊನೆಗೂ ಕ್ಷಮೆ ಕೇಳಿದ್ದಾರೆ. 9 ವರ್ಷಗಳ ಹಿಂದೆ ಸತ್ಯರಾಜ್ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದರು. ಇದ್ರ ವಿಡಿಯೋ ಕೆಲವೇ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಾ ಇತ್ತು. ಇದ್ರ ಬಗ್ಗೆ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಸತ್ಯರಾಜ್ ಕನ್ನಡಿಗರ ಕ್ಷಮೆ ಕೇಳುವವರೆಗೂ ಬಾಹುಬಲಿ-2 ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ಕನ್ನಡಿಗರ ಹೋರಾಟಕ್ಕೆ ಮಣಿದ ಸತ್ಯರಾಜ್ ಕ್ಷಮೆ ಕೇಳಿದ್ದಾರೆ. 9 ವರ್ಷಗಳ ಹಿಂದೆ ಈ ಬಗ್ಗೆ ಹೇಳಿಕೆ ನೀಡಿದ್ದೆ. ಕನ್ನಡ ಹಾಗೂ ಕನ್ನಡಿಗರ ವಿರೋಧಿ ನಾನಲ್ಲ. ಒಂದು ವೇಳೆ ನನ್ನ ಮಾತಿನಿಂದ ಕನ್ನಡಿಗರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಸತ್ಯರಾಜ್ ಹೇಳಿದ್ದಾರೆ. ಬಹಿರಂಗವಾಗಿ ಕ್ಷಮೆ ಕೇಳಿದ ಸತ್ಯರಾಜ್, ಬಾಹುಬಲಿ ಚಿತ್ರದಲ್ಲಿ ನಾನು ಸಣ್ಣ ಪಾತ್ರದಲ್ಲಿ ನಟಿಸಿದ್ದು, ನನ್ನ ಹೇಳಿಕೆಯಿಂದ ಚಿತ್ರಕ್ಕೆ ಅಡ್ಡಿಯುಂಟಾಗಬಾರದು ಎಂದು ಸತ್ಯರಾಜ್ ಹೇಳಿದ್ದಾರೆ.

ಈ ಬಗ್ಗೆ ಸಭೆ ನಡೆಸಲಿರುವ ಕನ್ನಡ ಪರ ಸಂಘಟನೆ ನಾಯಕರು ಚಿತ್ರ ಬಿಡುಗಡೆ ಮಾಡಲು ಅನುಮತಿ ನೀಡಬೇಕೋ ಬೇಡವೋ ಎನ್ನುವ ಬಗ್ಗೆ  ತೀರ್ಮಾನ ಕೈಗೊಳ್ಳಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...