alex Certify
ಕನ್ನಡ ದುನಿಯಾ       Mobile App
       

Kannada Duniya

ಸತೀಶ್ ಜಾರಕಿಹೊಳಿ ಆಗ್ತಾರಾ ರಾಜ್ಯದ ಮುಖ್ಯಮಂತ್ರಿ…?

ರಾಜ್ಯ ರಾಜಕಾರಣದಲ್ಲಿ ದಿಢೀರನೇ ಬಿರುಸಿನ ಚಟುವಟಿಕೆಗಳು ನಡೆಯಲಾರಂಭಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕೆಲ ಶಾಸಕರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದ್ದು, ಒಂದೊಮ್ಮೆ ಈ ಬೆಳವಣಿಗೆ ನಡೆದರೆ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿರುವ ಬಿಜೆಪಿ ಅಧಿಕಾರದ ಗದ್ದುಗೆಗೇರಲು ಸಾಧ್ಯವಾಗಲಿದೆ.

ಪ್ರಸಕ್ತ ರಾಜಕೀಯ ಬೆಳವಣಿಗೆಯಲ್ಲಿ ಎಲ್ಲರ ಚಿತ್ತ ಜಾರಕಿಹೊಳಿ ಸಹೋದರರತ್ತ ನೆಟ್ಟಿದ್ದು, ಬೆಳಗಾವಿ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕೈ ಮೇಲಾಗಿದ್ದರಿಂದ ಒಳಗೊಳಗೆ ಕುದಿಯುತ್ತಿರುವ ಜಾರಕಿಹೊಳಿ ಸಹೋದರರು, ತಮ್ಮ ಬೆಂಬಲಿಗ ಶಾಸಕರೊಂದಿಗೆ ನಿರಂತರ ಸಭೆ ನಡೆಸುತ್ತಿರುವುದು ಮೈತ್ರಿಕೂಟ ಸರ್ಕಾರದ ಅಸ್ತಿತ್ವಕ್ಕೆ ಆತಂಕವನ್ನು ತಂದೊಡ್ಡಿದೆ.

ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕ ಶ್ರೀರಾಮುಲು ಅವರೊಂದಿಗೆ ಸಂಪರ್ಕದಲ್ಲಿದ್ದು, ತಮ್ಮ ಸಹೋದರ ಸತೀಶ್ ಜಾರಕಿಹೊಳಿಯವರನ್ನು ಕಡೆ ಪಕ್ಷ ಒಂದು ವರ್ಷದ ಅವಧಿಗಾದರೂ ಮುಖ್ಯಮಂತ್ರಿಯನ್ನಾಗಿ ಮಾಡುವ ಭರವಸೆ ನೀಡಿದರೆ ಬೆಂಬಲಿಗ ಶಾಸಕರೊಂದಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆನ್ನಲಾಗುತ್ತಿದೆ.

ಈ ಕುರಿತ ವದಂತಿಗಳಿಗೆ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲವೆಂದು ಹೇಳುತ್ತಿರುವುದರ ಜೊತೆಗೆ, ಸತೀಶ್ ಜಾರಕಿಹೊಳಿಯವರನ್ನು ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...