alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ನ್ಯೂಸ್: ಸೆ.16 ರಂದು ಜಾರಕಿಹೊಳಿ ಸಹೋದರರೂ ಸೇರಿದಂತೆ ಹಲವು ಶಾಸಕರ ರಾಜೀನಾಮೆ…?

ಹಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜ್ಯ ರಾಜಕಾರಣದ ಗುದ್ದಾಟ ಈಗ ಕ್ಲೈಮಾಕ್ಸ್ ಹಂತ ತಲುಪಿದ್ದು, ಸೆಪ್ಟೆಂಬರ್ 16ರಂದು ಜಾರಕಿಹೊಳಿ ಸಹೋದರರು, ಮತ್ತವರ ಬೆಂಬಲಿಗ ಶಾಸಕರು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಲಾಗಿದೆ.

ಕಳೆದೆರಡು ದಿನಗಳಿಂದಲೂ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಿರಂತರ ಸಭೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟಿರುವ ಈ ಬಣ, ಸೆಪ್ಟಂಬರ್ 16 ರೊಳಗೆ ಅದು ಈಡೇರದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.

ಈ ಬೆಳವಣಿಗೆಗಳಿಗೆ ಪೂರಕವೆಂಬಂತೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮುಂದಿನ 15 ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಇದಕ್ಕೆ ನನ್ನನ್ನು ಹೊಣೆ ಮಾಡಬಾರದು ಎಂದು ಹೇಳಿದ್ದಾರೆ.

ಇದರ ಮಧ್ಯೆ ಬಿಜೆಪಿ ಪಾಳೆಯದಲ್ಲೂ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ಬೆಂಬಲಿಗರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಸ್ಪಷ್ಟ ಚಿತ್ರಣ ಸೆಪ್ಟಂಬರ್ 16 ರ ಬಳಿಕ ದೊರೆಯುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...