alex Certify
ಕನ್ನಡ ದುನಿಯಾ       Mobile App
       

Kannada Duniya

ಜಾರಕಿಹೊಳಿ ಸಹೋದರರತ್ತ ಎಲ್ಲರ ಚಿತ್ತ…!

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅನಿವಾರ್ಯವಾಗಿ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಈಗ ಸಂಕಷ್ಟ ಬಂದೊದಗಿದೆ.

ಸರ್ಕಾರ ಅಧಿಕಾರಕ್ಕೆ ಬಂದು ಶತದಿನಗಳನ್ನು ಪೂರೈಸಿರುವ ಮಧ್ಯೆಯೇ ಬೆಳಗಾವಿ ಜಿಲ್ಲಾ ರಾಜಕಾರಣ, ಇಂದು ಸಮ್ಮಿಶ್ರ ಸರ್ಕಾರವನ್ನೇ ಬುಡಮೇಲು ಮಾಡುವ ಮಟ್ಟಕ್ಕೆ ಬಂದು ನಿಂತಿದೆ.

ಬೆಳಗಾವಿ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮೇಲುಗೈ ಸಾಧಿಸಿದರೆಂಬ ಕಾರಣಕ್ಕೆ ಆಕ್ರೋಶಗೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಸಹೋದರ ಸತೀಶ್ ಜಾರಕಿಹೊಳಿ, ಈ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಚಿವ ಡಿ.ಕೆ. ಶಿವಕುಮಾರ್ ಬೆಂಬಲಿಸಿದ್ದು ಮತ್ತಷ್ಟು ಕುದಿಯುವಂತೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ರಾಜಕೀಯದಲ್ಲಿ ನಾವುಗಳು ಅವರ ಸಲಹೆ ಕೇಳಿದರೆ ಮಾತ್ರ ಮಧ್ಯ ಪ್ರವೇಶಿಸಬೇಕು ಎಂದು ಹೇಳುವ ಮೂಲಕ ಶಿವಕುಮಾರ್ ಅವರ ವಿರುದ್ಧ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದರು.

ಈ ಎಲ್ಲ ಬೆಳವಣಿಗೆಗಳ ನಂತರ ಇದುವರೆಗೂ ತೆರೆಮರೆಯಲ್ಲಿದ್ದ ಸತೀಶ್ ಜಾರಕಿಹೊಳಿ, ಇಂದು ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ಜೊತೆಗೆ ಮುಂದಿನ 15 ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬೆಳವಣಿಗೆ ನಡೆಯಬಹುದು. ಇದಕ್ಕೆ ತಾವು ಹೊಣೆಯಲ್ಲ ಎಂದು ಹೇಳುವುದರೊಂದಿಗೆ ಮಹತ್ತರ ಬೆಳವಣಿಗೆಗಳಾಗುವ ಸೂಚನೆ ನೀಡಿದ್ದಾರೆ.

ಜಾರಕಿಹೊಳಿ ಸಹೋದರರ ಜೊತೆ ಹಲವು ಶಾಸಕರುಗಳಿದ್ದು, ಒಂದೊಮ್ಮೆ ತಮ್ಮ ಬೇಡಿಕೆಗಳು ಈಡೇರದಿದ್ದರೆ ಇವರೆಲ್ಲರೂ ರಾಜೀನಾಮೆ ನೀಡುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿರುವ ಬಿಜೆಪಿ ಅಧಿಕಾರಕ್ಕೇರಲು ಅವಕಾಶ ಮಾಡಿಕೊಡುವ ಸಾಧ್ಯತೆಗಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...