alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ಶಾಕ್ ಕೊಟ್ಟ ಶಾಸಕ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರು, ಹೈಕಮಾಂಡ್ ಸೂಚನೆಯ ಹೊರತಾಗಿಯೂ ಪಕ್ಷಕ್ಕೆ ಸೆಡ್ಡು ಹೊಡೆದಿದ್ದು, ರಾಜೀನಾಮೆ ಪರ್ವ ಮುಂದುವರಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಸ್. ಆರ್. ಪಾಟೀಲ್ ರಾಜೀನಾಮೆ ನೀಡಿದ ಬಳಿಕ ಇದೀಗ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

ಸೋಮವಾರದಂದು ಈ-ಮೇಲ್ ಮೂಲಕ ತಮ್ಮ ರಾಜೀನಾಮೆ ಪತ್ರ ರವಾನಿಸಿರುವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷದ ಶಾಸಕರಾಗಿ ಮುಂದುವರಿಯಲು ತೀರ್ಮಾನಿಸಿದ್ದಾರೆಂದು ಹೇಳಲಾಗಿದೆ. ಸಚಿವ ಸಂಪುಟ ರಚನೆಯ ಬಳಿಕ ತಲೆದೋರಿರುವ ಬಿಕ್ಕಟ್ಟನ್ನು ಸರಿಪಡಿಸಲು ಹೈಕಮಾಂಡ್ ಮುಂದಾಗಿರುವ ಮಧ್ಯೆ ಅತೃಪ್ತ ಶಾಸಕರು ಭಿನ್ನಮತ ಚಟುವಟಿಕೆ ಮುಂದುವರಿಸುತ್ತಿರುವುದು ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...