alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ನಾಯಕರಿಗೆ ಶಾಕ್: ಮತ್ತೊಂದು ವಿಕೆಟ್ ಪತನ?

ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಮುನಿಸಿಕೊಂಡಿರುವ ಕಾಂಗ್ರೆಸ್ ನಾಯಕರುಗಳು ಒಬ್ಬೊಬ್ಬರಾಗಿ ತಮ್ಮ ಸ್ಥಾನ ತ್ಯಜಿಸುತ್ತಿದ್ದು, ಈಗ ಮತ್ತೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಮೊದಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ ಎಸ್.ಆರ್. ಪಾಟೀಲ್ ರಾಜೀನಾಮೆ ನೀಡಿದ್ದು, ಅವರ ಬಳಿಕ ಈಗ ಮತ್ತೊಬ್ಬ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆನ್ನಲಾಗಿದೆ.

ಈ ಮೇಲ್ ಮೂಲಕ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ ಎಂದು ತಿಳಿದು ಬಂದಿದ್ದು, ಎರಡನೇ ಹಂತದಲ್ಲಿ ಸಚಿವ ಸ್ಥಾನ ನೀಡಲು ಮುಂದಾದರೂ ಸ್ವೀಕರಿಸದಿರಲು ತೀರ್ಮಾನಿಸಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...