alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ಬಾಸ್ ಸ್ಪರ್ಧಿ ಸುನಾಮಿ ಕಿಟ್ಟಿ ವಿರುದ್ದ ಕಿಡ್ನಾಪ್ ಕೇಸ್

‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದ ಸುನಾಮಿ ಕಿಟ್ಟಿ ವಿರುದ್ದ ವ್ಯಕ್ತಿಯೊಬ್ಬನನ್ನು ಅಪಹರಿಸಿ ಗನ್ ತೋರಿಸಿ ಬೆದರಿಕೆ ಹಾಕಿರುವ ಸಂಬಂಧ ದೂರು ದಾಖಲಾಗಿದೆ.

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೊಳಗಾಗಿದ್ದ ಗಿರೀಶ್ ಎಂಬವರು ಸುನಾಮಿ ಕಿಟ್ಟಿ ಹಾಗೂ ಆತನ ಸ್ನೇಹಿತ ಸುನೀಲ್ ವಿರುದ್ದ ದೂರು ನೀಡಿದ್ದು, ಕಿಡ್ನಾಪ್ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಾರ್ ಸಪ್ಲೇಯರ್ ಗಿರೀಶ್ ನನ್ನು ಸುನಾಮಿ ಕಿಟ್ಟಿ ಹಾಗೂ ಆತನ ಸ್ನೇಹಿತ ಸುನೀಲ್ ಅಪಹರಿಸಿದ್ದರೆನ್ನಲಾಗಿದ್ದು, ಪಾಯಿಂಟ್ ಬ್ಲಾಕ್ ನಲ್ಲಿ ಗನ್ ಇಟ್ಟು ಬೆದರಿಕೆ ಒಡ್ಡಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಘಟನೆಗೆ ಪ್ರೇಮ ಪ್ರಕರಣ ಕಾರಣವೆನ್ನಲಾಗಿದ್ದು, ವ್ಯಕ್ತಿಯೊಬ್ಬನನ್ನು ಅಪಹರಿಸಲು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಗೆ ಸುನಾಮಿ ಕಿಟ್ಟಿ ಹಾಗೂ ಸುನೀಲ್ ಬಂದಿದ್ದರೆನ್ನಲಾಗಿದೆ. ಆದರೆ ಈ ವೇಳೆ ಆತ ಪರಾರಿಯಾಗಿದ್ದು, ಗಿರೀಶ್ ನನ್ನೇ ಆ ವ್ಯಕ್ತಿ ಎಂದು ಭಾವಿಸಿ ಆತನನ್ನು ಅಪಹರಿಸಿ ಚಿತ್ರಹಿಂಸೆ ನೀಡಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...