alex Certify
ಕನ್ನಡ ದುನಿಯಾ       Mobile App
       

Kannada Duniya

ದಿಢೀರ್ ಅಸ್ವಸ್ಥಗೊಂಡ ಶಾಲಾ ವಿದ್ಯಾರ್ಥಿಗಳು

ಶಿವಮೊಗ್ಗ : ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಹೆಗಲತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 28 ಶಾಲಾ ಮಕ್ಕಳು ದಿಢೀರ್ ಅಸ್ವಸ್ಥರಾಗಿ ಇಲ್ಲಿನ ಮೆಗ್ಗಾನ್ ಹಾಗೂ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ವಾಂತಿ- ಕೆಮ್ಮು, ಜ್ವರ ಮತ್ತು ಗಂಟಲುಬೇನೆಯಿಂದ ಬಳಲುತ್ತಿರುವುದನ್ನು ಶಿಕ್ಷಕರು ಗಮನಿಸಿ ತಕ್ಷಣ ಪೋಷಕರಿಗೆ ಮತ್ತು ಗ್ರಾಮಸ್ಥರ ಗಮನಕ್ಕೆ ತಂದು 18 ಮಕ್ಕಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದು, ಉಳಿದ 10 ಮಕ್ಕಳು ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆದೇಶ ಮತ್ತು ಮಾರ್ಗದರ್ಶನದ ಮೇರೆಗೆ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಅಧಿಕಾರಿಗಳು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಅಸ್ವಸ್ಥಗೊಂಡಿರುವ 18 ಮಕ್ಕಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶರಾವತಿ ಮಕ್ಕಳ ವಾರ್ಡ್ ನಲ್ಲಿ ದಾಖಲಾಗಿದ್ದು, ವೈದ್ಯರು ತಪಾಸಣೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಮೆಗ್ಗಾನ್ ಆಸ್ಪತ್ರೆಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಕಿಮ್ಮನೆ ರತ್ನಾಕರ್, ಸ್ಥಳೀಯ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಾಗೂ ಮಾಜಿ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮಕ್ಕಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...