alex Certify
ಕನ್ನಡ ದುನಿಯಾ       Mobile App
       

Kannada Duniya

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ

puc-result-300x161

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ.52.38 ರಷ್ಟು ಫಲಿತಾಂಶ ಬಂದಿದೆ. ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಗಳಿಸಿವೆ. ಬೀದರ್ ಜಿಲ್ಲೆ ಫಲಿತಾಂಶದಲ್ಲಿ ಕೊನೆ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ ಶೇ.5 ರಷ್ಟು ಕುಸಿತವಾಗಿದೆ.

ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ. 60.28 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. 44.74 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಫಲಿತಾಂಶ ಪ್ರಕಟಿಸಿದ ಸಚಿವ ತನ್ವೀರ್ ಸೇಠ್, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರಲ್ಲದೇ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎದೆಗುಂದದೆ ಮುಂದಿನ ಪರೀಕ್ಷೆಗೆ ಈಗಿನಿಂದಲೇ ಸಿದ್ದತೆ ನಡೆಸುವಂತೆ ಮನವಿ ಮಾಡಿದರು. ಫಲಿತಾಂಶಕ್ಕಾಗಿ, karresults.nic.in ಜಾಲತಾಣ ವೀಕ್ಷಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...