alex Certify BREAKING : ‘ದ್ವಿತೀಯ PUC’ ಫಲಿತಾಂಶ ಪ್ರಕಟ, ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ ರಾಜ್ಯಕ್ಕೆ ಟಾಪರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ದ್ವಿತೀಯ PUC’ ಫಲಿತಾಂಶ ಪ್ರಕಟ, ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ ರಾಜ್ಯಕ್ಕೆ ಟಾಪರ್

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮಿ ರಾಜ್ಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 600 ಕ್ಕೆ 598 ಅಂಕಗಳನ್ನು ಪಡೆಯುವ ಮೂಲಕ ವಿದ್ಯಾಲಕ್ಷ್ಮಿ ರಾಜ್ಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ.

ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿಯನ್ನು ಮುಂದೆ ಓದಿ ತಿಳಿದುಕೊಳ್ಳಿ.ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರದಲ್ಲಿ ನೀಡಲಾದ ರಿಜಿಸ್ಟರ್ ನಂಬರ್ / ರೋಲ್ ನಂಬರ್ (ನೋಂದಣಿ ಸಂಖ್ಯೆ) ಬಳಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ನೀಡುವ ವೆಬ್ಸೈಟ್ ನಲ್ಲಿ ಫಲಿತಾಂಶ ಚೆಕ್ ಮಾಡಬಹುದು.

ಫಲಿತಾಂಶ ಚೆಕ್ ಮಾಡುವುದು ಹೇಗೆ..?

1) ಮೊದಲು https://karresults.nic.in/ ಭೇಟಿ ನೀಡಿ
2) ನಂತರ ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡಲಯ ಲಿಂಕ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ 3ರಿಜಿಸ್ಟರ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಕನಿಷ್ಠ ಶೇಕಡ.35 ಅಂಕಗಳನ್ನು ಗಳಿಸಿದರೆ ಉತ್ತೀರ್ಣರಾಗಬಹುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...