alex Certify
ಕನ್ನಡ ದುನಿಯಾ       Mobile App
       

Kannada Duniya

ವೇಗವಾಗಿ ಬಂದ ಬೆಂಝ್ ಕಾರಿನಿಂದ ಸರಣಿ ಅಪಘಾತ

broken-glass-accidentವೇಗವಾಗಿ ಬೆಂಝ್ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಯೊಬ್ಬರು ಸರಣಿ ಅಪಘಾತವೆಸಗಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿರುವ ಘಟನೆ ಬೆಂಗಳೂರಿನ ಜಯನಗರದ ಅಶೋಕ ಪಿಲ್ಲರ್ ಬಳಿ ನಡೆದಿದೆ.

ಬನಶಂಕರಿ ನಿವಾಸಿ ಡಾ. ಶಂಕರ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೆಂಝ್ ಕಾರು, ಇಂಡಿಕಾ ಕಾರ್, ಝೆನ್ ಕಾರ್ ಹಾಗೂ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ರಿಜ್ವಾನ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಳಿಕ ಅಲ್ಲಿಯೇ ಇರುವ ಸಣ್ಣ ಮನೆಯೊಂದಕ್ಕೆ ನುಗ್ಗಿದ್ದು, ಇದರಿಂದಾಗಿ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅತಿ ವೇಗ, ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ವಿಲ್ಸನ್ ಗಾರ್ಡನ್ ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕ ಡಾ. ಶಂಕರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...