alex Certify
ಕನ್ನಡ ದುನಿಯಾ       Mobile App
       

Kannada Duniya

ಏರ್ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ: ಮೂರು ಕಾರುಗಳು ಜಖಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆ ಕೊಟ್ಟಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಒಂದೆಡೆ ಪ್ರತಿಭಟನೆಗಳ ಕಾವು ಜೋರಾಗುತ್ತಿದ್ದರೆ ಇನ್ನೊಂದೆಡೆ, ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ, ಕೆಲ ಕಾಲ ಟ್ರಾಫಿಕ್ ಜಾಮ್ ಆದ ಘಟನೆಯೂ ನಡೆದಿದೆ.

ಬೆಂಗಳೂರಿನ ಸಾದಹಳ್ಳಿ ಗೇಟ್ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಮೂರು ಕಾರುಗಳು ಒಂದಕ್ಕೊಂದು ಗುದ್ದಿವೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಹುಂಡೈ ಐ 10 ಕಾರಿಗೆ ಓಲಾ ಕ್ಯಾಬ್ ಒಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಐ 10 ಕಾರು ಇನ್ನೊಂದು ಓಮ್ನಿಗೆ ಹೋಗಿ ಗುದ್ದಿದೆಯಲ್ಲದೇ ನಿಂತಿದ್ದ ಲಾರಿಯೊಂದಕ್ಕೂ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂರೂ ಕಾರುಗಳು ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಟ್ರಾಫಿಕ್ ಜಾಮ್ ಸರಿಪಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...