alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಪುತ್ರನ ವಿರುದ್ಧ ಶಂಕರ್ ಬಿದರಿ ಕಣಕ್ಕೆ..?

ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ನಡೆಸಿವೆ. ಆಕಾಂಕ್ಷಿಗಳು ಕೂಡ ತಾವು ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಸದ್ದಿಲ್ಲದೇ ಪ್ರಚಾರ ನಡೆಸಿದ್ದಾರೆ.

ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಾರಿ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಸಿ.ಎಂ. ಚಾಮುಂಡೇಶ್ವರಿಯಿಂದ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿ.ಎಂ. ಪುತ್ರ ಯತೀಂದ್ರ ಸ್ಪರ್ಧಿಸಲಿದ್ದಾರೆ. ಕ್ಷೇತ್ರದಲ್ಲಿ ಸಂಘಟನೆಯಲ್ಲಿ ತೊಡಗಿರುವ ಯತೀಂದ್ರ ಈಗಾಗಲೇ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳತೊಡಗಿದ್ದಾರೆ.

ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವೆನ್ನಲಾಗಿದ್ದು, ಯತೀಂದ್ರ ಅವರ ವಿರುದ್ಧ ಮಾಜಿ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ಕಣಕ್ಕಿಳಿಸಲು ಬಿ.ಜೆ.ಪಿ. ಚಿಂತಿಸಿದೆ ಎನ್ನಲಾಗಿದೆ.

ಈ ಕ್ಷೇತ್ರದಲ್ಲಿ ಕಾ.ಪು. ಸಿದ್ಧಲಿಂಗಸ್ವಾಮಿ ಆಕಾಂಕ್ಷಿಯಾಗಿದ್ದು, ಸಿದ್ಧಲಿಂಗಸ್ವಾಮಿ ಅಥವಾ ಶಂಕರ್ ಬಿದರಿ ಅವರಲ್ಲಿ ಬಿ.ಜೆ.ಪಿ. ಯಾರಿಗೆ ಅವಕಾಶ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...