alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಹರಿದು ಸಾವನ್ನಪ್ಪಿದ 35 ಕುರಿಗಳು

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮದ ಬಸ್ ಹರಿದ ಪರಿಣಾಮ 35 ಕುರಿ ಹಾಗೂ 6 ಕತ್ತೆಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ಬೈಪಾಸ್ ರಸ್ತೆಯ ಬಿಳಕಿ ಕ್ರಾಸ್ ಬಳಿ ನಡೆದಿದೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಕುರಿಗಾಯಿಗಳು 1,500 ಕುರಿ ಹಿಂಡು ಹಾಗೂ ಕೆಲ ಕತ್ತೆಗಳೊಂದಿಗೆ ಸಾಗುತ್ತಿದ್ದ ವೇಳೆ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದಿದೆ.

ಇದರಿಂದಾಗಿ 35 ಕುರಿ ಹಾಗೂ 6 ಕತ್ತೆಗಳು ಸಾವನ್ನಪ್ಪಿದ್ದು, ಶಿರಾ ಮೂಲದ ಕುರಿಗಾಯಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ನ್ಯೂಟೌನ್ ಸಂಚಾರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...